
ಅಲ್ಪಸಂಖ್ಯಾತರ ಅಭಿವೃದ್ಧಿ, ರಕ್ಷಣೆಗೆ ಕಾಂಗ್ರೆಸ್ ಹಲವಾರು ಯೋಜನೆಗಳನ್ನು ರೂಪಿಸಿದೆ ಎಂದು ಸಂಸದ ಹಾಗೂ ಮಾಜಿ ಕೇಂದ್ರ ಸಚಿವ ಆಸ್ಕರ್ ಫರ್ನಾಂಡಿಸ್ ತಿಳಿಸಿದರು.
ಪ್ರದೇಶ ಕಾಂಗ್ರೆಸ್‌ನಲ್ಲಿ ನಡೆದ ರಾಜ್ಯಮಟ್ಟದ ಕ್ರಿಶ್ಚಿಯನ್ ಸಮುದಾಯದ ಕಾಂಗ್ರೆಸ್ ನಾಯಕರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಪಕ್ಷವು ಕ್ರಿಶ್ಚಿಯನ್ ಸಮುದಾಯದವರಿಗೆ ಸಾಕಷ್ಟು ಪ್ರಾತಿನಿಧ್ಯ ನೀಡಿದೆ ಎಂದು ಹೇಳಿದರು.
ಅಲ್ಪಸಂಖ್ಯಾತರಿಗೆ ಪ್ರಾತಿನಿಧ್ಯ ಕಡಿಮೆ ಮಾಡಲು ಕೆಲವು ಪಿತೂರಿ ನಡೆಯುತ್ತಿದ್ದು, ಸಂವಿಧಾನದಲ್ಲಿ ಬದಲಾವಣೆ ತರಲು ಹೊರಟಾಗ ಅದನ್ನು ಎದುರಿಸಿ ಕಾಂಗ್ರೆಸ್ ಅಲ್ಪಸಂಖ್ಯಾತರ ರಕ್ಷಣೆ ಮಾಡಿದೆ ಎಂದರು.
ಕ್ರಿಶ್ಚಿಯನ್ ಸಮುದಾಯದ ಅಭಿವೃದ್ಧಿಗೆ ಕಾಂಗ್ರೆಸ್ ನೀಡಿರುವ ಆದ್ಯತೆಯನ್ನು ಗಮನಿಸಿ ಸಮಸ್ತ ಕ್ರಿಶ್ಚಿಯನ್ ಸಮುದಾಯದವರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವಂತೆ ಮನವಿ ಮಾಡಿದರು.
No comments:
Post a Comment