Sunday, November 27, 2011

ಪಾಪು ಹೇಳಿದ ಮೇಲೆ ಠಾಕ್ರೆ ನಾಯಿನೆ









ಜ್ಞಾನಪೀಠ ಪ್ರಶಸ್ತಿ ವಿಜೇತ ಡಾ.ಚಂದ್ರಶೇಖರ ಕಂಬಾರರ ಸೊಂಟ ಮುರಿದು ಬುದ್ದಿ ಕಲಿಸಿ ಎಂದು ಸಾಮ್ನಾ ಪತ್ರಿಕೆಯಲ್ಲಿ ಲೇಖನ ಬರೆದ ಶಿವಸೇನಾ ಮುಖ್ಯಸ್ಥ ಬಾಳಾ ಠಾಕ್ರೆ ವಿರುದ್ಧ ರಾಜ್ಯಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಅಲ್ಲದೇ ನಾಯಿ ಬೊಗಳುತ್ತದೆಂದು ನಾವು ಬೊಗಳಿಕ್ಕಾಗುವುದಿಲ್ಲ ಎಂದು ಹಿರಿಯ ಪತ್ರಕರ್ತ ಪಾಟೀಲ್ ಪುಟ್ಟಪ್ಪ ತಿರುಗೇಟು ನೀಡಿದ್ದಾರೆ. ಚಂದ್ರಶೇಖರ ಕಂಬಾರ ಅವರು ಶುಕ್ರವಾರ ಪಾಟೀಲ್ ಪುಟ್ಟಪ್ಪ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ನಂತರ ಸುದ್ದಿಗಾರರ ಜತೆ ಮಾತನಾಡಿದ ಪಾಪು, ಮಹಾರಾಷ್ಟ್ರದಲ್ಲಿ ಕನ್ನಡಿಗರಿಗೆ ಸೂಕ್ತ ಪ್ರಾತಿನಿಧ್ಯ ನೀಡಿಲ್ಲ. ಮುಂಬೈನಲ್ಲಿಯೂ ಕನ್ನಡಿಗರಿದ್ದಾರೆ. ಅವರ ಮೇಲೂ ನಾವು ಪ್ರತೀಕಾರ ತೆಗೆದುಕೊಳ್ಳುತ್ತೇವೆ ಎಂಬ ಠಾಕ್ರೆ ಹೇಳಿಕೆ ಉದ್ದಟತನದ್ದು ಎಂದರು. ಬಾಳಾ ಠಾಕ್ರೆ ಕಾಡು ಪ್ರಾಣಿಗಳಿಗಿಂತಲೂ ಕೀಳಾಗಿ ಹೇಳಿಕೆ ನೀಡಿದ್ದಾರೆ. ಮುಂದಿನ ಪೀಳಿಗೆಗೆ ಠಾಕ್ರೆಯಂತವರು ಕೆಟ್ಟ ಪರಂಪರೆ ಹುಟ್ಟು ಹಾಕುತ್ತಿದ್ದಾರೆ. ಬೆಂಗಳೂರಿನಲ್ಲಿ ಇರುವುದಕ್ಕಿಂತಲೂ ಹೆಚ್ಚಿನ ಕನ್ನಡಿಗರು ಮುಂಬೈನಲ್ಲಿದ್ದಾರೆ ಇದನ್ನು ಮರಾಠಿಗರು ಅರಿತುಕೊಳ್ಳಬೇಕು ಎಂದು ಪಾಪು ತಿರುಗೇಟು ನೀಡಿದ್ದಾರೆ. ಯಾವುದೇ ಕಾರಣಕ್ಕೂ ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರುವುದಿಲ್ಲ. ಭಾಷೆಯ ವಿಚಾರದಲ್ಲಿಯೇ ಎರಡೂ ರಾಜ್ಯಗಳ ನಡುವೆ ದ್ವೇಷ ಹುಟ್ಟುಹಾಕುವಂತಹ ಠಾಕ್ರೆಯಂತಹ ವ್ಯಕ್ತಿಗಳ ಬಗ್ಗೆ ಎಚ್ಚರವಾಗಿರಬೇಕು. ಈ ಬಗ್ಗೆ ಎರಡು ರಾಜ್ಯಗಳ ರಂಗದವರು ಒಂದಾಗಬೇಕು ಎಂದು ಸಲಹೆ ನೀಡಿದರು.






















No comments:

Post a Comment